• Uncategorised
  • 0

ಕಿಚ್ಚನ ಕೆನ್ನೆಗೆ ಚಂದ್ರಚೂಡ್ ಮುತ್ತು, ನೆಟ್ಟಿಗರಿಂದ ಬಗೆಬಗೆಯ ಕಾಮೆಂಟ್

ಸ್ಯಾಂಡಲ್‌ವುಡ್‌ ನಟ ಕಿಚ್ಚ ಸುದೀಪ್‌ ಹುಟ್ಟುಹಬ್ಬದ ಸಂಭ್ರಮಾಚರಣೆಯಲ್ಲಿ ಇದ್ದಾರೆ. ಇನ್ನು ಅವರು ಇಂದೇ ತಮ್ಮ ಟ್ವೀಟ್‌ ಖಾತೆ ಮೂಲಕ ಪೋಸ್ಟ್‌ರ್‌ವೊಂದನ್ನು ಹಂಚಿಕೊಳ್ಳುವ ಮೂಲಕ ಅಭಿಮಾನಿಗಳಿಗೆ ಗುಡ್‌ನ್ಯೂಸ್‌ವೊಂದನ್ನು ನೀಡಿದ್ದಾರೆ. ಹಾಗಾದರೆ ಆ ಶುಭಸುದ್ದಿ ಏನು ಎನ್ನುವ ಮಾಹಿತಿಯನ್ನು ಇಲ್ಲಿ ತಿಳಿಯಿರಿ.

ಒಂದಾನೊಂದು ಕಾಲದಲ್ಲಿ ಕ್ರಿಸ್ತ ಶಕ 2209ರಲ್ಲಿ ಎಂದು ಆರಂಭವಾಗುವ ವಿಡಿಯೋದಲ್ಲಿ ಬಿಲ್ಲಾ ರಂಗ ಭಾಷಾಎಂಬ ಮೂವರ ಕಥೆಯ ಬಗ್ಗೆ ವಿಡಿಯೋದಲ್ಲಿ ಮಾಹಿತಿ ನೀಡಲಾಗಿದೆ. ಈ ಸಿನಿಮಾಗೆ ಅನೂಪ್ ಬಂಡಾರಿ ಕಥೆ ಬರೆದಿದ್ದು, ನಿರ್ದೇಶನ ಮಾಡುತ್ತಿದ್ದಾರೆ.ಈ ಸಿನಿಮಾ ಯಾವ ಮಟ್ಟದಲ್ಲಿ ಸದ್ದು ಮಾಡಲಿದೆ ಎಂದು ಕಾದು ನೋಡಬೇಕಾಗಿದೆ. ಅಭಿನಯ ಚಕ್ರವರ್ತಿ ಕಿಚ್ಚ ಸುದೀಪ್ ಅವರ ಹುಟ್ಟುಹಬ್ಬದ ಹಿನ್ನೆಲೆ ಇಂದು ಅಭಿಮಾನಿಗಳಲ್ಲಿ ಸಂಭ್ರಮ ಮನೆ ಮಾಡಿದೆ. ಇನ್ನು ಮ್ಯಾಕ್ಸ್ ಸಿನಿಮಾದ ಬಳಿಕ ನಟ ಸುದೀಪ್ ಈ ಹೊಸ ಸಿನಿಮಾ ಒಪ್ಪಿಕೊಂಡಿದ್ದಾರೆ. ತಾರಾಗಣದ ಬಗ್ಗೆ ಯಾವುದೇ ಮಾಹಿತಿ ಹೊರಬಿದ್ದಿಲ್ಲ.

ಅಭಿನಯ ಚಕ್ರವರ್ತಿ ಕಿಚ್ಚ ಸುದೀಪ್ ಅವರ 46ನೇ ಚಿತ್ರ ಮ್ಯಾಕ್ಸ್. ಈ ಸಿನಿಮಾವನ್ನು ಹೊಸಪ್ರತಿಭೆ ವಿಜಯ್ ಕಾರ್ತಿಕೇಯ ನಿರ್ದೇಶನ ಮಾಡಿದ್ದಾರೆ. ಚಿತ್ರದಲ್ಲಿ ಸಂಯುಕ್ತ ಹೊರನಾಡು, ವರಲಕ್ಷ್ಮೀ ಶರತ್‌ಕುಮಾರ್, ರವಿಶಂಕರ್ ಪಿ, ಪ್ರಮೋದ್ ಶೆಟ್ಟಿ, ಶರತ್ ಲೋಹಿತಾಶ್ವ, ಅರ್ಜುನ್ ಬಿ.ಆರ್, ಸುಕೃತಾ ವಾಗ್ಲೆ ಮುಂತಾದವರು ನಟಿಸಿದ್ದು, ಈ ಸಿನಿಮಾದ ಮೇಲೆ ಸಾಕಷ್ಟು ನಿರೀಕ್ಷೆಗಳಿವೆ. ಕಲೈಪುಲಿ ಎಸ್. ತನು ಜೊತೆ ಕಿಚ್ಚ ಕ್ರಿಯೇಷನ್ಸ್ ಬ್ಯಾನರ್‌ನಲ್ಲಿ ಸ್ವತಃ ಸುದೀಪ್ ಅವರೇ ಮ್ಯಾಕ್ಸ್ ಸಿನಿಮಾ ನಿರ್ಮಾಣ ಮಾಡಿದ್ದು, ಇದೇ ಸೆಪ್ಟಂಬರ್ ೨೭ರಂದು ಸಿನಿಮಾ ಬಿಡುಗಡೆಯಾಗುವ ನಿರೀಕ್ಷೆಯಿದೆ.

ಇನ್ನು ಅವರು ತುಂಬಾ ಅಭಿಮಾನಿಗಳು ಸೇರುತ್ತಾರೆಂಬ ಕಾರಣಕ್ಕೆ ಜೆಪಿ ನಗರದ ತಮ್ಮ ನಿವಾಸದ ಬಳಿ ಹುಟ್ಟುಹಬ್ಬವನ್ನು ಆಚರಿಸಿಕೊಂಡಿಲ್ಲ. ಬದಲಾಗಿ ಜಯನಗರದ ಎಂಇಎಸ್ ಮೈದಾನದಲ್ಲಿ ಕಾರ್ಯಕ್ರಮ ನಡೆಸಿ, ಅಭಿಮಾನಿಗಳನ್ನುದ್ದೇಶಿಸಿ ಮಾತನಾಡಿದರು. ಇನ್ನು ಈ ಕಾರ್ಯಕ್ರಮದಲ್ಲಿ ಹಲವಾರು ಗಣ್ಯ ವ್ಯಕ್ತಿಗಳು ಸೇರಿದ್ದರು. ಹಾಗೂ ಅಲ್ಲಿಗೆ ಆಗಮಿಸಿದ್ದ ಚಕ್ರವರ್ತಿ ಅವರು ಮೇಲೆ ಹಾರಿ ಸುದೀಪ್ ಅವರಿಗೆ ಮುತ್ತ ನೀಡಿ ವಿಶ್ ಮಾಡಿದ್ದಾರೆ.

You may also like...

Leave a Reply

Your email address will not be published. Required fields are marked *