ಮದುವೆಯಾದ ಬಳಿಕ ಅಭಿಷೇಕ್ ಹಾಗೂ ಅವಿವಾ ಭರ್ಜರಿ ಡ್ಯಾನ್ಸ್, ಎಂಜಾಯ್ ಮಾಡಿದ ಸುಮಲತಾ

ರೆಬೆಲ್​ಸ್ಟಾರ್ ಅಂಬರೀಶ್ ಹುಟ್ಟುಹಬ್ಬ ಹಿನ್ನೆಲೆ ಪುತ್ರ ಅಭಿಷೇಕ್‌ ಅಂಬರೀಶ್‌ ವಿಶೇಷ ವಿಡಿಯೋ ಬಿಡುಗಡೆ ಮಾಡಿದ್ದಾರೆ. ಭಾವಿ ಪತ್ನಿ ಅವಿವಾ ಜೊತೆ ಹೆಜ್ಜೆ ಹಾಕಿರುವ ವಿಡಿಯೋ ಇದಾಗಿದ್ದು ಸಾಮಾಜಿಕ ಜಾಲತಾಣದಲ್ಲಿ ವೈರಲ್​ ಆಗಿದೆ.

ಈ ವಿಡಿಯೋದಲ್ಲಿ ಅಭಿಷೇಕ್ ಮತ್ತು ಭಾವಿ ಪತ್ನಿ ಅವಿವಾ ಬಿದ್ದಪ್ಪ, ಅಂಬರೀಶ್​ ಅವರ ಹಲವು ಜನಪ್ರಿಯ ಹಾಡುಗಳಿಗೆ ಹೆಜ್ಜೆ ಹಾಕಿದ್ದಾರೆ. ಫುಲ್ ರೆಟ್ರೋ ಸ್ಟೈಲ್​ನಲ್ಲಿ ಅಭಿಷೇಕ್ ಅಂಬರೀಶ್ ಹಾಗೂ ಅವಿವಾ ಬಿದ್ದಪ್ಪ ಹೆಜ್ಜೆ ಹಾಕಿರುವ ಹಾಡು ಸಾಮಾಜಿಕ ಜಾಲತಾಣದಲ್ಲೂ ವೈರಲ್ ಆಗುತ್ತಿದೆ. ಈ ಸಂಭ್ರಮಕ್ಕೆ ಕೆಆರ್‌ಜಿ ಕನೆಕ್ಟ್ಸ್ ಜೊತೆಯಾಗಿ ಕೈಜೋಡಿಸಿದೆ.

ಈ ವಿಡಿಯೋದಲ್ಲಿ ಅಭಿಷೇಕ್ ಮತ್ತು ಅವೀವಾ, ಅಂಬರೀಶ್​ ಅವರ ಹಲವು ಜನಪ್ರಿಯ ಹಾಡುಗಳಿಗೆ ಹೆಜ್ಜೆ ಹಾಕಿದ್ದಾರೆ. ಒಲವಿನ ಉಡುಗೊರೆ’, ಚಕ್ರವ್ಯೂಹ’, ‘ಮಂಡ್ಯದ ಗಂಡು’ ಸೇರಿದಂತೆ ಮುಂತಾದ ಚಿತ್ರಗಳ ಜನಪ್ರಿಯ ಹಾಡುಗಳಿಗೆ ಇಬ್ಬರು ಜೊತೆ ಜೊತೆಯಾಗಿ ಹೆಜ್ಜೆ ಹಾಕಿದ್ದಾರೆ. ಹಾಡುಗಳು ಸಾಮಾಜಿಕ ಜಾಲತಾಣಗಳಲ್ಲಿ ಬಿಡುಗಡೆಯಾಗಿದ್ದು, ಕೆಲವೇ ನಿಮಿಷಗಳಲ್ಲಿ ನೆಟಿಜನ್​ಗಳಿಂದ ಮೆಚ್ಚುಗೆ ವ್ಯಕ್ತವಾಗಿದೆ.

ಇನ್ನು ಅಭಿಷೇಕ್ ಅಂಬರೀಶ್ ಎರಡನೇ ಸಿನಿಮಾ ‘ಬ್ಯಾಡ್ ಮ್ಯಾನರ್ಸ್’ ಮುಗಿದಿದ್ದು ಶೀಘ್ರದಲ್ಲೆ ತೆರೆ ಕಾಣಲಿದೆ. ‘ಬ್ಯಾಡ್ ಮ್ಯಾನರ್ಸ್’ ಚಿತ್ರದಲ್ಲಿ ಅಭಿಷೇಕ್​ಗೆ ರಚಿತಾ ರಾಮ್ ಮತ್ತು ಪ್ರಿಯಾಂಕಾ ನಾಯಕಿಯರಾಗಿ ನಟಿಸಿದ್ದು, ದುನಿಯಾ ಸೂರಿ ಈ ಚಿತ್ರವನ್ನು ನಿರ್ದೇಶಿಸಿದ್ದಾರೆ. ಇದರ ನಡುವೆ ಅವರು ‘ಕಾಳಿ’ ಎಂಬ ಚಿತ್ರಕ್ಕೂ ಒಪ್ಪಿಗೆ ಸೂಚಿಸಿದ್ದಾರೆ.

ಈ ಚಿತ್ರವನ್ನು ‘ಮುಂಗಾರು ಮಳೆ’ ಖ್ಯಾತಿಯ ಕೃಷ್ಣ ನಿರ್ದೇಶನ ಮಾಡಲಿದ್ದಾರೆ. ಇದಾದ ಬಳಿಕ ರಾಕ್‌ಲೈನ್ ವೆಂಕಟೇಶ್ ನಿರ್ಮಾಣ ಹಾಗೂ ಮಹೇಶ್ ಕುಮಾರ್ ನಿರ್ದೇಶನದ ಮತ್ತೊಂದು ಸಿನಿಮಾ ಕೂಡ ಸೆಟ್ಟೇರಬೇಕಿದೆ.

https://youtu.be/dcuHuL40CoA?si=VzHNE79EinmypUwM

You may also like...