• Uncategorised

ಇಡೀ ಊರೇ ಬೆ‌.ಚ್ಚಿಬೀಳುವ ವರದಿ; ನೇಹಾ ಕೊ.ಲೆ ಮುನ್ನ ಆಕೆಯ ಜೊತೆ ಫಯಾಜ್ ಮಡಿದ್ದೇನು ಗೊ.ತ್ತಾ

ವಿದ್ಯಾರ್ಥಿನಿ ನೇಹಾ ಹಿರೇಮಠ್‌ ಮರಣೋತ್ತರ ಪರೀಕ್ಷೆಯ ವರದಿಯಲ್ಲಿ ಆಘಾತಕಾರಿ ಅಂಶಗಳು ಬೆಳಕಿಗೆ ಬಂದಿವೆ. ಆರೋಪಿ ಫಯಾಜ್‌ ನೇಹಾಳನ್ನು 9 ಬಾರಿ ಇರಿದಿದ್ದ ಎನ್ನಲಾಗಿತ್ತು. ಆದರೆ, ಮರಣೋತ್ತರ ಪರೀಕ್ಷೆಯಲ್ಲಿ 14 ಬಾರಿ ಇರಿದಿದ್ದಾನೆ ಎಂಬುದು ಗೊತ್ತಾಗಿದೆ.

14 ಕಡೆ ಗಾಯದ ಗುರುತು ಪತ್ತೆಯಾಗಿದ್ದು, ಹೃದಯಕ್ಕೆ ಚಾಕುವಿನಿಂದ ಇರಿದಿರುವುದು ಕೂಡ ಕಂಡುಬಂದಿದೆ. ನೇಹಾಳ ಕುತ್ತಿಗೆಗೆ ಹಲವು ಬಾರಿ ಫಯಾಜ್‌ ಇರಿದಿದ್ದರಿಂದ ರಕ್ತನಾಳ ಕಟ್ ಆಗಿ ವಿಪರೀತ ರಕ್ತಸ್ರಾವವಾಗಿದೆ. ಅದರಿಂದ ನೇಹಾ ಸಾವಿಗಿಡಾಗಿದ್ದಾಳೆ ಎಂದು ಮರಣೋತ್ತರ ಪರೀಕ್ಷೆಯ ವರದಿಯಲ್ಲಿ ಹೇಳಲಾಗಿದೆ.

ಏಪ್ರಿಲ್‌ 18ರ ಗುರುವಾರ ಸಂಜೆ 4.45ರ ಸುಮಾರಿಗೆ ಆರೋಪಿ ಫಯಾಜ್ ತನ್ನ ಕೈಯಲ್ಲಿ ಚಾಕು ಹಿಡಿದು, ಮಾಸ್ಕ್ ಧರಿಸಿಕೊಂಡು ಹುಬ್ಬಳ್ಳಿ ಬಿವಿಬಿ ಕಾಲೇಜಿನ್‌ ಕ್ಯಾಂಪಸ್ ಒಳಗೆ ಬಂದಿದ್ದ. ವಿದ್ಯಾರ್ಥಿನಿ ನೇಹಾ ಹಿರೇಮಠ ಕಾಲೇಜಿನಿಂದ ಹೊರಬರುತ್ತಿದ್ದ ಸಂದರ್ಭದಲ್ಲಿ ಏಕಾಏಕಿ ಆಕೆಯ ಮೇಲೆ ದಾಳಿ ಮಾಡಿದ ಫಯಾಜ್‌, ನೇಹಾಳ ಕುತ್ತಿಗೆ, ಹೊಟ್ಟೆ ಹಾಗೂ ಬೆನ್ನಿನ ಭಾಗಕ್ಕೆ ಮನಬಂದಂತೆ ಚಾಕುವಿನಿಂದ ಇರಿದಿದ್ದ.

ತಕ್ಷಣವೇ ನೇಹಾಳನ್ನು ಕಾಲೇಜಿನ ಆಡಳಿತ ಮಂಡಳಿ ಹಾಗೂ ವಿದ್ಯಾರ್ಥಿಯರು ಕಿಮ್ಸ್‌ ಆಸ್ಪತ್ರೆಗೆ ದಾಖಲಿಸಿದ್ದರು. ಆದರೆ, ಆಸ್ಪತ್ರೆಗೆ ಸಾಗಿಸುವ ಮಾರ್ಗ ಮಧ್ಯದಲ್ಲಿಯೇ ನೇಹಾ ಸಾವನ್ನಪ್ಪಿದ್ದಳು. ಆರೋಪಿ ಫಯಾಜ್‌ನನ್ನು ಬಂಧಿಸಲಾಗಿದೆ. ಸರ್ಕಾರ ಈ ಪ್ರಕರಣವನ್ನು ಸಿಐಡಿ ತನಿಖೆ ನಡೆಸಲು ನಿರ್ಧರಿಸಿದೆ. ನೇಹಾ ಕೊಲೆ ಪ್ರಕರಣವನ್ನು ಸಿಬಿಐಗೆ ನೀಡಬೇಕು ಎಂದು ಬಿಜೆಪಿ ಆಗ್ರಹಿಸಿತ್ತು. ಈ ಹಿನ್ನೆಲೆ ಸರ್ಕಾರ ಸಿಐಡಿ ತನಿಖೆ ನಡೆಸಲು ಮುಂದಾಗಿದೆ.

You may also like...