ಮುರುಘಾಶ್ರೀಗಳನ್ನು ಮತ್ತೊಮ್ಮೆ ಎಳೆದುಕೊಂಡು ಹೋದ ಪೊ ಲೀಸರು, ಕಾರಣ ಏನು ಗೊ.ತ್ತಾ

ಚಿತ್ರದುರ್ಗ ನಗರದ ನಗರದ ಹೊರವಲಯದಲ್ಲಿರುವ ಮುರುಘಾ ಮಠದ ಅಪ್ರಾಪ್ತ ಬಾಲಕಿಯರ ಮೇಲೆ ಲೈಂಗಿಕ ದೌರ್ಜನ್ಯ ಪ್ರಕರಣದಲ್ಲಿ ಕಾರಾಗೃಹ ಸೇರಿದ್ದ ಮುರುಘಾ ಮಠದ ಡಾ ಶಿವಮೂರ್ತಿ ಮುರುಘಾ ಶರಣರು ಜಾಮೀನಿನ ಮೇಲೆ ಬಿಡುಗಡೆಯಾಗಿದ್ದು, ನಾಲ್ಕು ದಿನ ಕಳೆಯುವುದರೊಳಗೆ ಮತ್ತೆ ಶ್ರೀಗಳ ಬಂಧನವಾಗಿದೆ.

ಕಳೆದ ನಾಲ್ಕು ದಿನಗಳ ಹಿಂದಷ್ಟೇ ಹೈಕೋರ್ಟ್ ನಿಂದ ಜಾಮೀನು ಪಡೆದು ಚಿತ್ರದುರ್ಗ ಕಾರಾಗೃಹದಿಂದ ಬಿಡುಗಡೆಯಾಗಿ ದಾವಣಗೆರೆಯ ವಿರಕ್ತ ಮಠದಲ್ಲಿ ಶ್ರೀಗಳು ತಂಗಿದ್ದರು. ಅಲ್ಲಿಗೆ ಆಗಮಿಸಿದ ಚಿತ್ರದುರ್ಗ ಡಿವೈಎಸ್ಪಿ ನೇತೃತ್ವದಲ್ಲಿ ಅಧಿಕಾರಿಗಳ ತಂಡ ಶ್ರೀಗಳನ್ನು ಬಂಧಿಸಿದ್ದು ವೈದ್ಯಕೀಯ ಪರೀಕ್ಷೆಯ ಬಳಿಕ ಸಂಜೆ ಕೋರ್ಟಿಗೆ ಹಾಜರುಪಡಿಸುವ ಸಾಧ್ಯತೆಯಿದೆ.

ಇದೀಗ ಚಿತ್ರದುರ್ಗ ಪೊಲೀಸರು ವಿರಕ್ತ ಮಠಕ್ಕೆ ಹೋಗಿ ಶ್ರೀಗಳನ್ನು ಬಂಧಿಸಿ ಕರೆತರುತಿದ್ದಾರೆ. 16ರಂದು ಪೋಕ್ಸೊ ಮೊದಲನೇ ಪ್ರಕರಣದಲ್ಲಿ ಚಿತ್ರದುರ್ಗದ ಮುರುಘಾ ಶ್ರೀಗಳಿಗೆ ಹೈಕೋರ್ಟ್ ಶರತ್ತು ಬದ್ಧ ಜಾಮೀನು ಮಂಜೂರು ಮಾಡಿತ್ತು. ಈ ಜಾಮೀನಿನ ಮೇಲೆ ಬಿಡುಗಡೆ ಕೂಡ ಆಗಿದ್ದರು. ಆದ್ರೇ 2ನೇ ಪೋಕ್ಸೊ ಪ್ರಕರಣದಲ್ಲಿ ಜಾಮೀನು ಪಡೆಯೋ ಮುನ್ನವೇ ಬಿಡುಗಡೆ ಆಗಿದ್ದ ಕಾರಣ, ಅವರನ್ನು ಇಂದು ಜಾಮೀನು ಪಡೆದ 4 ದಿನಗಳಲ್ಲೇ ಮತ್ತೆ ಬಂಧಿಸಲಾಗಿದೆ.

ದಾವಣಗೆರೆಯ ವಿರಕ್ತ ಮಠದಲ್ಲಿ ಶರಣರನ್ನು ಬಂಧಿಸಿದ ಪೊಲೀಸರು ಚಿತ್ರದುರ್ಗಕ್ಕೆ ಕರೆತಂದು 2ನೇ ಹೆಚ್ಚುವರಿ ಜಿಲ್ಲಾ ಮತ್ತು ಸೆಷನ್ಸ್‌ ನ್ಯಾಯಾಲಯದ ಎದುರು ಹಾಜರುಪಡಿಸಿದರು. ಡಿಸೆಂಬರ್ 2ರವರೆಗೆ ನ್ಯಾಯಾಂಗ ಬಂಧನಕ್ಕೆ ಒಪ್ಪಿಸಿ ನ್ಯಾಯಾಧೀಶೆ ಬಿ.ಕೆ.ಕೋಮಲಾ ಆದೇಶಿಸಿದ್ದರು. ಜಿಲ್ಲಾ ಆಸ್ಪತ್ರೆಯಲ್ಲಿ ಶರಣರನ್ನು ವೈದ್ಯಕೀಯ ಪರೀಕ್ಷೆಗೆ ಒಳಪಡಿಸಿದ ಪೊಲೀಸರು, ಕಾರಾಗೃಹಕ್ಕೆ ಒಪ್ಪಿಸಿದರು.

ಸೆಷನ್ಸ್‌ ಕೋರ್ಟ್‌ ಹೊರಡಿಸಿದ ವಾರೆಂಟ್‌ಗೆ ಹೈಕೋರ್ಟ್‌ ತಡೆಯಾಜ್ಞೆ ನೀಡಿದೆ ಹಾಗಾಗಿ ಬಿಡುಗಡೆಯಾಗುವ ಸಾಧ್ಯತೆಗಳಿವೆ.

You may also like...