• Uncategorised

ರಾಮಮಂದಿರ ಉದ್ಘಾಟನೆಗೆ ಆಹ್ವಾನ ಬಂದಿಲ್ಲ, ಬಂದರೆ ಹೋಗುತ್ತಾರಾ ಸಿಎಂ ಸಿದ್ದರಾಮಯ್ಯ

ಭಾರತೀಯರ ಕನಸು ರಾಮ ಮಂದಿರ ಇನ್ನೇನು ಕೆಲವೇ ದಿನಗಳಲ್ಲಿ ಉದ್ಘಾಟನೆ ಆಗಲಿದೆ .ಜನವರಿ 22ರಂದು ಅಯೋಧ್ಯೆಯಲ್ಲಿ ನಡೆಯಲಿರುವ ರಾಮ ಪ್ರಾಣ ಪ್ರತಿಷ್ಠಾಪನೆ ಕಾರ್ಯಕ್ರಮಕ್ಕೆ ಆಗಮಿಸುವಂತೆ ಇದುವರೆಗೆ ಯಾವುದೇ ಆಹ್ವಾನ ಬಂದಿಲ್ಲ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿ ಅಚ್ಚರಿ ಮೂಡಿಸಿದ್ದಾರೆ.

ಅಯೋಧ್ಯಾ ರಾಮ ಮಂದಿರ ಉದ್ಘಾಟನೆಗೆ ಯಾರಿಗೆ ಆಹ್ವಾನ ಕೊಟ್ಟಿದ್ದಾರೆ, ಯಾರಿಗೆ ಬಿಟ್ಟಿದ್ದಾರೆಂದು ನನಗೆ ಗೊತ್ತಿಲ್ಲ. ಯಾರಿಗೆ ಕೊಟ್ಟಿದ್ದಾರೊ ಅವರು ಹೋಗಲಿ, ಯಾರಿಗೆ ಬಿಡುತ್ತಾರೋ ಬಿಡಲಿ. ಯಾರಿಗೆ ಆಹ್ವಾನ ಕೊಡುತ್ತಾರೆಂದು ಅವರಿಗೆ ಸೇರಿದ್ದು ಎಂದು ಸಿಎಂ ಸಿದ್ದರಾಮಯ್ಯ ಹೇಳಿದ್ದಾರೆ.

ಹೌದು ಕೊಪ್ಪಳದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಈವರೆಗೆ ಆಹ್ವಾನ ಬಂದಿಲ್ಲ. ಆಹ್ವಾನ ಬಂದ ಮೇಲೆ ಈ ಬಗ್ಗೆ ಯೋಚಿಸಲಾಗುವುದು ಎಂದಿದ್ದಾರೆ.ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಮತ್ತು ಪಕ್ಷದ ನಾಯಕಿ ಸೋನಿಯಾಗಾಂಧಿ ಅವರಿಗೆ ರಾಮಮಂದಿರ ಉದ್ಘಾಟನಾ ಕಾರ್ಯಕ್ರಮದ ಆಹ್ವಾನ ಬಂದಿದ್ದು, ಖರ್ಗೆ ಮತ್ತು ಸೋನಿಯಾ ಭಾಗವಹಿಸುವ ಬಗ್ಗೆ ಸೂಕ್ತ ಸಮಯದಲ್ಲಿ ನಿರ್ಧಾರ ಕೈಗೊಳ್ಳಲಾಗುವುದು ಎಂದು ಶುಕ್ರವಾರ ಕಾಂಗ್ರೆಸ್‌ ತಿಳಿಸಿದೆ.

ಪ್ರಧಾನಿ ನರೇಂದ್ರ ಮೋದಿ, ಉತ್ತರ ಪ್ರದೇಶ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್ ಸೇರಿದಂತೆ 6 ಸಾವಿರಕ್ಕೂ ಹೆಚ್ಚು ಜನರು ಕಾರ್ಯಕ್ರಮದಲ್ಲಿ ಪಾಲ್ಗೊಳ್ಳುವ ನಿರೀಕ್ಷೆಯಿದೆ. ಇನ್ನು
ಜನವರಿ 22 ಸರ್ಕಾರಿ ರಜೆ ಘೋಷಣೆ ಮಾಡುವ ವಿಚಾರವಾಗಿ ಮಾತನಾಡಿ, ಅಯೋಧ್ಯಾ ರಾಮ ಮಂದಿರ ಉದ್ಘಾಟನೆ ಕೇಂದ್ರ ಸರ್ಕಾರ ಮಾಡುತ್ತದೆ. ಅವರು ಬೇಕಾದರೆ ರಜೆ ಮಾಡಲಿ ಎಂದರು.

You may also like...