• Uncategorised

500 ಯುವತಿಯರನ್ನು ಬಾ.ತ್ ರೂಮ್ ಗೆ ಕರೆದುಕೊಂಡು ಹೋಗುತ್ತಿದ್ದ ಕಾಲೇಜು ಪ್ರೊಫೆಸರ್, ಮೋದಿಗೆ ಪತ್ರ ಬರೆದ ಸ್ಟೂಡೆಂಟ್ಸ್

ಗುರು ದೇವರಂತೆ ಎನ್ನುವ ಕಾಲ ಒಂದಿತ್ತು. ಆದರೆ ಹರಿಯಾಣದಲ್ಲಿ ನಡೆದ ಈ ಘಟನೆ ಎಲ್ಲರನ್ನೂ ಬೆಚ್ಚಿ ಬೇಳಿಸಿದೆ. ಹೌದು ಇದೀಗ ಕಾಲೇಜಿನಲ್ಲಿ ನಡೆಯುತ್ತಿರುವ ಲೈಂಗಿಕ ಕಿರುಕುಳ ಕುರಿತು 500ಕ್ಕೂ ಹೆಚ್ಚು ವಿದ್ಯಾರ್ಥಿನಿಯರು ಧ್ವನಿ ಎತ್ತಿದ್ದಾರೆ. ಹರ್ಯಾಣದ ಸಿರ್ಸಾದಲ್ಲಿರುವ ಚೌಧರಿ ದೇವಿ ಲಾಲ್ ವಿಶ್ವವಿದ್ಯಾಲಯದ ಸುಮಾರು 500 ವಿದ್ಯಾರ್ಥಿನಿಯರು ಪ್ರೊಫೆಸರ್ ಮೇಲೆ ಲೈಂಗಿಕ ದೌರ್ಜನ್ಯದ ಆರೋಪ ಮಾಡಿದ್ದಾರೆ.

ಪತ್ರದ ಪ್ರತಿಯನ್ನು ಉಪಕುಲಪತಿ ಅಜ್ಮೀರ್ ಸಿಂಗ್ ಮಲಿಕ್, ರಾಜ್ಯಪಾಲ ಬಂಡಾರು ದತ್ತಾತ್ರೇಯ, ರಾಜ್ಯ ಗೃಹ ಸಚಿವ ಅನಿಲ್ ವಿಜ್ ಮತ್ತು ರಾಷ್ಟ್ರೀಯ ಮಹಿಳಾ ಆಯೋಗದ ಅಧ್ಯಕ್ಷೆ ರೇಖಾ ಶರ್ಮಾ ಮತ್ತು ಇತರರಿಗೆ ಕಳುಹಿಸಲಾಗಿದೆ. ಆದರೆ, ಈ ಬಗ್ಗೆ ಸರಕಾರದಿಂದ ಇದುವರೆಗೆ ಯಾವುದೇ ಪ್ರತಿಕ್ರಿಯೆ ಬಂದಿಲ್ಲ. ಪ್ರೊಫೆಸರ್​ ತಮ್ಮ ಚೇಂಬರ್​ಗೆ ಕರೆಸಿಕೊಂಡು, ಬಳಿಕ ಬಾತ್​ರೂಮ್​ಗೆ ಕರೆದೊಯ್ದು, ಖಾಸಗಿ ಅಂಗಗಳನ್ನು ಮುಟ್ಟಿ ಅಶ್ಲೀಲ ಕೃತ್ಯವೆಸಗಿದ್ದಾರೆ ಎಂದು ಆರೋಪಿಸಲಾಗಿದೆ.

ಇದು ಹಲವು ತಿಂಗಳಿನಿಂದ ನಡೆಯುತ್ತಿದೆ ಎಂದು ಪತ್ರದಲ್ಲಿ ಹೇಳಿಕೊಂಡಿದ್ದಾರೆ. ವಿಶ್ವವಿದ್ಯಾಲಯದ ರಿಜಿಸ್ಟ್ರಾರ್ ರಾಜೇಶ್ ಕುಮಾರ್ ಬನ್ಸಾಲ್ ಅವರು ಅನಾಮಧೇಯ ಪತ್ರ ಸ್ವೀಕರಿಸಿರುವುದನ್ನು ಒಪ್ಪಿಕೊಂಡಿದ್ದಾರೆ. ಘಟನೆ ವಿಶ್ವವಿದ್ಯಾನಿಲಯದಲ್ಲಿ ಬೆಳಕಿಗೆ ಬಂದ ಬೆನ್ನಲ್ಲೇ ಹರ್ಯಾಣದ ಮನೋಹರ್ ಲಾಲ್ ಖಟ್ಟರ್ ಸರ್ಕಾರ ವಿಪಕ್ಷಗಳ ದಾಳಿಗೆ ಗುರಿಯಾಗಿದೆ.

ಸಿರ್ಸಾದ ಚೌಧರಿ ದೇವಿ ಲಾಲ್ ವಿಶ್ವವಿದ್ಯಾನಿಲಯದ 500 ವಿದ್ಯಾರ್ಥಿನಿಯರಿಂದ ಕೇಳಿಬಂದಿರುವ ಗಂಭೀರ ಆರೋಪ ತೀವ್ರ ಕಳವಳಕಾರಿಯಾಗಿದೆ ಎಂದು ಅವರು ಬರೆದಿದ್ದಾರೆ. ವಿದ್ಯಾರ್ಥಿನಿಯರು ನ್ಯಾಯಕ್ಕಾಗಿ ರಾಜ್ಯಪಾಲರಿಂದ ಪ್ರಧಾನಿಗೆ ಪತ್ರ ಬರೆಯಬೇಕಾಗಿರುವುದು ಬೇಸರದ ಸಂಗತಿ ಎಂದು ಕಾಂಗ್ರೆಸ್ ನಾಯಕ ದೀಪೇಂದ್ರ ಸಿಂಗ್ ಹೂಡಾ ಬರೆದಿದ್ದಾರೆ.

ವಿದ್ಯಾರ್ಥಿನಿಯರ ಆರೋಪಗಳ ಬಗ್ಗೆ ಉನ್ನತ ಮಟ್ಟದ ನಿಷ್ಪಕ್ಷಪಾತ ತನಿಖೆ ನಡೆಸಿ ಅವರಿಗೆ ನ್ಯಾಯ ಒದಗಿಸಬೇಕು ಎಂಬುದು ನನ್ನ ಮನವಿ ಎಂದಿದ್ದಾರೆ.
ಒಟ್ಟಿನಲ್ಲಿ ಹೇಳುವುದಾದರೆ ಬೇಲಿಯೇ ಎದ್ದು ಹೊಲವ ಮೇಯ್ದ ಹಾಗೆ ಆಗಿದೆ.

You may also like...